• myspiritualvoice2025@gmail.com

மத்தேயு - 25

New Testament

Header
shape
New Testament
மத்தேயு - 25

43. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.

1. ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.

44. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.

2. ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.

45. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.

3. ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,

46. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

4. ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.

5. ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.

6. ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.

7. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;

8. ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.

9. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.

10. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.

11. ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.

12. ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

13. ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.

14. ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.

15. ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.

16. ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.

17. ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.

18. ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.

19. ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.

20. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.

21. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

22. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

23. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

24. ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

25. ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.

26. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

27. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.

28. ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.

29. ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.

30. ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.

31. ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

32. ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;

33. ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.

34. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

35. ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;

36. ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.

37. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ

38. ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?

39. ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.

40. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

41. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

42. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.