• myspiritualvoice2025@gmail.com

நீதிமொழிகள் - 24

பழைய ஏற்பாடு

Header
shape
பழைய ஏற்பாடு
நீதிமொழிகள் - 24

11. ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ

12. ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?

1. ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;

2. ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.

3. ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;

4. ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.

5. ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.

6. ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.

7. ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.

8. ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.

9. ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.

10. ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.

13. ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;

14. ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.

15. ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;

16. ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.

17. ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;

18. ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.

19. ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;

20. ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.

21. ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.

22. ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?

23. ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.

24. ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.

25. ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.

26. ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.

27. ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.

28. ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.

29. ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.

30. ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;

31. ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.

32. ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.

33. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;

34. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.